ತ್ರಿಶಾ ವಿದ್ಯಾ ಕಾಲೇಜು ಹಾಗೂ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ತ್ರಿಶಾ ವಿದ್ಯಾ ಕಾಲೇಜು ಮತ್ತು ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ ಇವರು ಜಂಟಿಯಾಗಿ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸಿದರು. ನಿವೃತ್ತ ಮಿಲಿಟರಿ ಪೋಲೀಸ್ ಸುಬೇದಾರ್ ರವೀಂದ್ರ ಪೈ ಧ್ವಜಾರೋಹಣ ನೆರವೇರಿಸಿ ದೇಶಕ್ಕಾಗಿ ಹೋರಾಡುವ ಸೈನಿಕರ ಮಹತ್ವವನ್ನು ತಿಳಿಸಿ ಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರು ಸ್ವಾತಂತ್ರ್ಯ ಗಳಿಸಿದಂದಿನಿಂದ ಇಂದಿನವರೆಗೆ ದೇಶ ಅಭಿವೃದ್ಧಿ ಹೊಂದಿದ ಪರಿಯನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಈ ಸಂದರ್ಭದಲ್ಲಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ […]