ಜ. 12 ರಂದು ಶಾಲಾ ಮಕ್ಕಳಿಂದ ‘ಸ್ವಚ್ಛ ಉಡುಪಿ’ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
ಉಡುಪಿ: ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಪ್ಲಾಸ್ಟಿಕ್ ಮತ್ತು ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಜ. 12 ರಂದು ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ರಜತೋತ್ಸವ ಸಮಿತಿಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 1096 ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸುಮಾರು 1,60,000 ಶಾಲಾ ಮಕ್ಕಳಿಂದ ಏಕಕಾಲದಲ್ಲಿ ಆಯಾಯ ಶಾಲೆಗಳ ಅಕ್ಕ ಪಕ್ಕದ ವಠಾರದಲ್ಲಿ “ಸ್ವಚ್ಛ ಉಡುಪಿ” ಎಂಬ ಶೀರ್ಷಿಕೆಯೊಂದಿಗೆ […]
ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಪಡೆದ ಉಡುಪಿ; ಸ್ವಚ್ಛತಾ ಸೇನಾನಿಗಳ ಪಾತ್ರ ಅನನ್ಯ : ಪ್ರಸನ್ನ ಹೆಚ್
ಉಡುಪಿ: ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಸ್ಥಾನ ಪಡೆಯುವಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳ ಪಾತ್ರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯ ಈ ಸಾಧನೆಯನ್ನು ನಿರಂತರವಾಗಿ ಮುಂದುವರೆಸುವಂತೆ ಗ್ರಾಮೀಣ ಸ್ವಚ್ಛತಾ ಕಾರ್ಯಕರ್ತರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಚ್ಛ […]
ಹೋಟೇಲ್ ಗಳಲ್ಲಿ ಹಸಿ ಕಸ ನಿರ್ವಹಣೆಗಾಗಿ ಬಲ್ಕ್ ವೇಸ್ಟ್ ಜಾಗೃತಿ ಕಾರ್ಯಕ್ರಮ
ಉಡುಪಿ: ನಗರ ಸಭೆ ಉಡುಪಿ ಹಾಗೂ ಸಿತಾರ ಸಂಸ್ಥೆ ದಾವಣಗೆರೆ ಇವರ ಸಹಯೋಗದಲ್ಲಿ ಸ್ವಚ್ಛ ಭಾರತ್ ಅಭಿಯಾನ (ನಗರ)ದ ಅಡಿಯಲ್ಲಿ ಬಲ್ಕ್ ವೇಸ್ಟ್ ಉತ್ಪಾದಕರಿಗೆ ಜಾಗೃತಿ ಕಾರ್ಯಕ್ರಮವು ನಗರದ ಕಿದಿಯೂರು ಹೋಟೆಲ್‌ನಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಬೀಡು ವಾರ್ಡಿನ ನಗರಸಭಾ ಸದಸ್ಯ ಟಿ.ಜಿ ಹೆಗ್ಡೆ ಮಾತನಾಡಿ, ಉಡುಪಿ ನಗರ ಸಭೆಯು ಸ್ವಚ್ಛತೆ ವಿಭಾಗದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಸ್ವಚ್ಚ ಸರ್ವೇಕ್ಷಣಾ -2022 ರಲ್ಲಿ ರಾಜ್ಯದಲ್ಲಿ ಉಡುಪಿ ನಗರವು ಮೊದಲ ಸ್ಥಾನ ಪಡೆಯಲು ನಗರ ಪ್ರದೇಶಗಳಲ್ಲಿ […]