ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಪಡೆದ ಉಡುಪಿ; ಸ್ವಚ್ಛತಾ ಸೇನಾನಿಗಳ ಪಾತ್ರ ಅನನ್ಯ : ಪ್ರಸನ್ನ ಹೆಚ್
ಉಡುಪಿ: ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಸ್ಥಾನ ಪಡೆಯುವಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳ ಪಾತ್ರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯ ಈ ಸಾಧನೆಯನ್ನು ನಿರಂತರವಾಗಿ ಮುಂದುವರೆಸುವಂತೆ ಗ್ರಾಮೀಣ ಸ್ವಚ್ಛತಾ ಕಾರ್ಯಕರ್ತರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಚ್ಛ […]