ಉಡುಪಿಯ ಸ್ವಚ್ಛತೆಗೆ ಪೌರಕಾರ್ಮಿಕರ ಅವಿರತ ಸೇವೆ ಕಾರಣ: ಶೋಭಾ ಕರಂದ್ಲಾಜೆ
ಉಡುಪಿ: ಉಡುಪಿ ನಗರವು ಸ್ವಚ್ಛತೆಗ ಹೆಸರುವಾಸಿಯಾಗಿದೆ. ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅವಿರತವಾಗಿದ್ದು, ನಗರವನ್ನು ಸ್ವಚ್ಛವಾಗಿಡಲು ಪೌರಕಾರ್ಮಿಕರು ಶ್ರಮ ವಹಿಸುತ್ತಿದ್ದಾರೆ. ಕೊರೋನ ಸಂದರ್ಭದಲ್ಲಿ ಪೌರಕಾರ್ಮಿಕರು ಸಮಾಜದ ಉಳಿವಿಗಾಗಿ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ನಗರದ ಅಜ್ಜರಕಾಡು ಪುರಭವನದಲ್ಲಿ, ಉಡುಪಿ ನಗರಸಭೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಲ ಹೊರುವ ಪದ್ಧತಿ ನಿಷೇಧಕ್ಕೆ ಡಾ. ವಿ.ಎಸ್ ಆಚಾರ್ಯ ಅವರ […]