ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವ:ಸ್ವರ್ಣಮಂತ್ರಹೋಮ
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಮಧ್ವಸರೋವರದ ಭಾಗೀರಥೀ ಗುಡಿಯ ಮುಂಭಾಗದಲ್ಲಿ ಸ್ವರ್ಣಮಂತ್ರಹೋಮ ನಡೆಯಿತು.