ಮತದಾನ ಜಾಗೃತಿ ಕುರಿತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಿರುಚಿತ್ರ ನಿರ್ಮಾಣ ಸ್ಪರ್ಧೆ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಅಂಗವಾಗಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾನ ಜಾಗೃತಿಯ ಕುರಿತ ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಿರುಚಿತ್ರದ ಅವಧಿಯು 30 ಸೆಕೆಂಡ್‌ಗಳಿಂದ ಗರಿಷ್ಠ 1 ನಿಮಿಷದ ಒಳಗಿರಬೇಕು. ವಿಷಯವು ಮತದಾರರಿಗೆ ತಮ್ಮ ಮತದ ಬಗ್ಗೆ ಹಾಗೂ ಮತದಾನ ಮಾಡಲು ಅರಿವು ಮೂಡಿಸುವಂತಿರಬೇಕು. ವೀಡಿಯೋ ಹಾಗೂ ಧ್ವನಿ ಉತ್ತಮವಾಗಿರಬೇಕು ಹಾಗೂ ವಿಷಯಕ್ಕೆ ತಕ್ಕಂತೆ ವೇಷಭೂಷಣವಿರಬೇಕು. ಕಿರುಚಿತ್ರವು ರಾಜಕೀಯ ವ್ಯಕ್ತಿ, ಪಕ್ಷ, ಚಿಹ್ನೆ, ಅಭ್ಯರ್ಥಿಯ ಕುರಿತು ವಿಷಯ ಹಾಗೂ ದೃಶ್ಯವನ್ನು ಒಳಗೊಂಡಿರಬಾರದು. ಯಾವುದೇ […]

ಸ್ವೀಪ್- ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ , ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಸಿದ್ದಪಡಿಸಿರುವ ಯಕ್ಷಗಾನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಚಂಡೆ ಬಾರಿಸುವ ಮೂಲಕ ಭಾನುವಾರ ಮಲ್ಪೆ ಬೀಚ್ ನಲ್ಲಿ ಚಾಲನೆ ನೀಡಿದರು. ಸಮೃಧ್ದಿಪುರದ ಮಹಾರಾಜನ ಕಥಾಹಿನ್ನಲೆ ಹೊಂದಿರುವ ಈ ಯಕ್ಷಗಾನದಲ್ಲಿ, ಪುತ್ರ ಸಂತಾನವಿಲ್ಲದ ಮಹಾರಾಜ ಸಹ , ತನ್ನ ಉತ್ತರಾಧಿಕಾರಿಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ , ಆರ್ಹ ಅಭ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆ ಮಾಡುವ ಕಥೆ ಇದ್ದು, ಯಾವುದೇ ಆಮಿಷಗಳಿಗೆ ಒಳಗಾಗದೇ ಪ್ರತಿಯೊಬ್ಬರೂ […]