ಮಕ್ಕಳಿಗೆ ಅತಿಯಾದ ಸ್ವಾತಂತ್ರ್ಯ ಸರಿಯಲ್ಲ: ಶ್ಯಾಮಲಾ ‌ಕುಂದರ್

ಉಡುಪಿ: ಮಕ್ಕಳಿಗೆ ಅತಿಯಾದ ಸ್ವಾತಂತ್ರ್ಯ ನೀಡಿದ ಪರಿಣಾಮ ಇಂದು ಲಿವಿಂಗ್‌ ರಿಲೇಷನ್ಶಫ್‌, ವಿಚ್ಛೇಧನದಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಯುವಲ್ಲಿ ತಾಯಂದಿರ ಪಾತ್ರ ಪ್ರಮುಖವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್‌ ಹೇಳಿದರು. ಉಡುಪಿ ತಾಲ್ಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಹಾಗೂ ಉಡುಪಿ ಬಂಟರ ಸಂಘದ ಸಹಯೋಗದಲ್ಲಿ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದೇ ಮನೆಯಲ್ಲಿ ವಾಸವಾಗಿದ್ದರೂ ಮೊಬೈಲ್‌ ಮೂಲಕ ಸಂಪರ್ಕಿಸುವ ಸ್ಥಿತಿ ನಿರ್ಮಾಣ […]