ಕೆದೂರಿನ ಸ್ಪೂರ್ತಿಧಾಮ ಸಂಸ್ಥೆಯನ್ನು ಮುಚ್ಚುವ ಬಗ್ಗೆ ಸಂಬಂಧಪಟ್ಟವರಲ್ಲಿ ಚರ್ಚಿಸಿದ್ದೇನೆ: ಶ್ಯಾಮಲಾ ಕುಂದರ್
ಕುಂದಾಪುರ: ಕೆದೂರಿನ ಸ್ಪೂರ್ತಿಧಾಮ ಸಂಸ್ಥೆಯನ್ನು ಮುಚ್ಚುವ ಬಗ್ಗೆ ಸಂಬಂಧಪಟ್ಟವರಲ್ಲಿ ಚರ್ಚಿಸಿದ್ದೇನೆ. ಡಿಐಜಿ ಹಾಗೂ ಜಿಲ್ಲಾಧಿಕಾರಿಯವರ ಜೊತೆ ಈ ಬಗ್ಗೆ ಮಾತನಾಡಿದ್ದು, ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಖಂಡಿತವಾಗಿಯೂ ಸ್ಪೂರ್ತಿ ಸಂಸ್ಥೆ ಮುಚ್ಚುವ ಕೆಲಸದಲ್ಲಿ ಪೊಲೀಸ್ ಇಲಾಖೆ ಕೆಲಸ ನಿರ್ವಹಿಸುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಉಡುಪಿಯ ಶ್ಯಾಮಲಾ ಕುಂದರ್ ಹೇಳಿದರು. ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ […]