ಸಿಡ್ನಿ: ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಭರ್ಜರಿ ಗೆಲುವು
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 66 ರನ್ ಗಳ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 374 ರನ್ ದಾಖಲಿಸಿತ್ತು. ಈ ಸವಾಲನ್ನು ಸ್ವೀಕರಿಸಿ ಬ್ಯಾಟಿಂಗ್‌ಗಿಳಿದ ಭಾರತ ತಂಡದ ಆರಂಭಿಕ ಪ್ರದರ್ಶನ ನಿರಾಸೆ ಮೂಡಿಸಿತ್ತು. ಆರಂಭಿಕ ದಾಂಡಿಗರಾಗಿ ಮಯಂಕ್ ಅಗರವಾಲ್ ಮತ್ತು ಶಿಖರ್ ಧವನ್ ಕ್ರೀಸ್‌ಗಿಳಿದಿದ್ದು 6ನೇ ಓವರ್‌ನಲ್ಲಿ ಮಯಂಕ್ ವಿಕೆಟ್ ಕಳೆದುಕೊಂಡರು. ಮಯಂಕ್ […]