ನ.30: ಸಿಂಡ್ ಬ್ಯಾಂಕ್ ವಿಲೀನ ವಿರೋಧಿಸಿ ಪ್ರತಿಭಟನಾ ರಕ್ತದಾನ ಶಿಬಿರ
ಉಡುಪಿ: ಸಿಂಡಿಕೇಟ್ ಬ್ಯಾಂಕ್‌ನ್ನು ಇನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ನ. 30ರಂದು ಮಣಿಪಾಲದ ಸಿಂಡಿಕೇಟ್ ಹೌಸ್‌ನಲ್ಲಿ ಪ್ರತಿಭಟನಾ ರಕ್ತದಾನ ಶಿಬಿರವನ್ನು ಆಯೋಜಿಸಿದೆ. ಇದರ ಮೂಲಕ ಗ್ರಾಹಕರಿಗೆ ಸಿಂಡಿಕೇಟ್ ಬ್ಯಾಂಕ್ ಉಳಿಸಿ ಆಂದೋಲನದ ಜಾಗೃತಿ ಮೂಡಿಸಲು ಉದ್ದೇಶಿಸಿದೆ ಎಂದು ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಯು. ಶಶಿಧರ ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕೇಂದ್ರ ಸರ್ಕಾರ ಕೈಗೊಂಡಿರುವ ಅಸಹನೀಯ ಮತ್ತು ಅನಗತ್ಯ ಕ್ರಮದ ಬಗ್ಗೆ ಜನರಿಗೆ ತಿಳಿಸುವ […]