ತಹಶಿಲ್ದಾರ್ ಅಜಿತ್ ಕುಮಾರ್ ರೈ ಸರಕಾರಿ ಹುದ್ದೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಬೆಂಗಳೂರಿನಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಬಂಧಿತರಾಗಿರುವ ಕೆ ಆರ್ ಪುರಂನ ತಹಶೀಲ್ದಾರ್, ಪುತ್ತೂರು ಮೂಲದ ಅಜಿತ್ ಕುಮಾರ್ ರೈ ಅವರನ್ನು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ತಹಸಿಲ್ದಾರ್ ಅಜಿತ್ ರೈ ಅವರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು, 1957 ರ ನಿಯಮ 10(1)(ಎ)(ಎ) ಮತ್ತು 10(2)(ಎ) ಅನ್ವಯ ಮುಂದಿನ ಆದೇಶದ ವರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ […]