ಆಶಾದೀಪ ಯೋಜನೆಯ ಪ್ರಯೋಜನ ಪಡೆಯಿರಿ: ಜಿಲ್ಲಾಧಿಕಾರಿ
ಉಡುಪಿ: ಕರ್ನಾಟಕ ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು, ಉದ್ದಿಮೆಗಳ ಮಾಲೀಕರನ್ನು ಪ್ರೋತ್ಸಾಹಿಸುವ ಸಲುವಾಗಿ ಜಾರಿಗೆ ತಂದಿರುವ ಆಶಾ ದೀಪ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ಎಲ್ಲಾ ಉದ್ದಿಮೆದಾರರು ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಆಶಾದೀಪ ಯೋಜನೆ ಅನುಷ್ಠಾನದ ಪ್ರಗತಿ ಮತ್ತು ಯೋಜನೆಯ ಅರ್ಜಿಗಳ ಪ್ರಾಥಮಿಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಶಾದೀಪ ಯೋಜನೆಯ ಕುರಿತಂತೆ ಜಿಲ್ಲೆಯ ಎಲ್ಲಾ ಉದ್ದಿಮೆದಾರರಿಗೆ ಅಗತ್ಯ […]