ನೆರೆ ಪೀಡಿತವಾಗುವ ಪ್ರದೇಶಗಳಲ್ಲಿ ಮುಂಜಾಗ್ರತೆ ಕೈಗೊಳ್ಳಿ: ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

ಉಡುಪಿ: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿಟ್ಟುಕೊಂಡು, ಆ ಪ್ರದೇಶದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಮತ್ತು ತುರ್ತು ಪರಿಸ್ಥಿತಿಯಲ್ಲಿ ತಕ್ಷಣವೇ ಸ್ಪಂದಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನದಿಗಳ ನೀರು ಸಮುದ್ರ ಸೇರುವ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ […]