ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ಯೂ ಮತ್ತು ಮಲೇರಿಯಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ರೋಗಗಳು ಬರುವ ಸಾಧ್ಯತೆ ಹೆಚ್ಚಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳು ಸಂತಾನೋತ್ಪತ್ತಿಗೊಳ್ಳುವುದರೊಂದಿಗೆ […]