ದಿವಾಳಿ ಪಾಕಿಸ್ತಾನಕ್ಕೆ ನೆರೆಹೊರೆ ಕಿರಿಕಿರಿ: ಅಫಘಾನಿಸ್ಥಾನದಿಂದ ನುಸುಳುಕೋರ ಬಾಧೆ; ವಿದ್ಯುತ್ ಬಿಲ್ ಬಾಕಿ ಪಾವತಿಗೆ ದುಂಬಾಲು ಬಿದ್ದ ಚೀನಾ

ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನದ ನಂತರ ಮೇ 9 ರಂದು ದೇಶವನ್ನು ಬೆಚ್ಚಿಬೀಳಿಸಿದ ಭಾರೀ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಕ್ರಮವಾಗಿ ತಂಗಿರುವ ಆಫ್ಘನ್ ಪ್ರಜೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಪಾಕಿಸ್ತಾನದ ಆಂತರಿಕ ಸಚಿವಾಲಯ ನಿರ್ಧರಿಸಿದೆ. ಪಾಕ್ ನ ವಿದೇಶಿ ಕಾಯಿದೆಯಡಿಯಲ್ಲಿ ಈಗ ವಿಚಾರಣೆಗೆ ಒಳಪಟ್ಟಿರುವ 200 ಕ್ಕೂ ಹೆಚ್ಚು ಆಫ್ಘನ್ನರನ್ನು ಪೊಲೀಸರು ಬಂಧಿಸಿದ್ದಾರೆ. ದೇಶದ ಆಂತರಿಕ ಸಚಿವಾಲಯವು ಇಸ್ಲಾಮಾಬಾದ್‌ನಲ್ಲಿರುವ ಎಲ್ಲಾ ಆಫ್ಘನ್ ವಸಾಹತುಗಳ ಲೆಕ್ಕಪರಿಶೋಧನೆಯನ್ನು ಬಯಸುತ್ತಿದೆ ಎನ್ನಲಾಗಿದ್ದು ಇದು ನೆರೆಯ […]

ಮಹಿಳೆಯರ ಉನ್ನತ ಶಿಕ್ಷಣ ನಿಷೇಧಿಸಿದ ತಾಲಿಬಾನ್: ಪರೀಕ್ಷೆ ಬಹಿಷ್ಕರಿಸಿ ಒಗ್ಗಟ್ಟು ಪ್ರದರ್ಶಿಸಿದ ವಿದ್ಯಾರ್ಥಿಗಳು

ಕಾಬುಲ್: ಅಫ್ಘಾನಿಸ್ತಾನದ ನಂಗರ್‌ಹಾರ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ತಾಲಿಬಾನ್‌ ಸರ್ಕಾರದ ಮಹಿಳೆಯರ ಶಿಕ್ಷಣ ನಿಷೇಧ ನಿರ್ಧಾರದ ವಿರುದ್ದ ಪ್ರತಿಭಟಿಸಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಒಗ್ಗಟ್ಟಿನ ಪ್ರದರ್ಶನದಲ್ಲಿ ತಮ್ಮ ಪರೀಕ್ಷೆಗಳನ್ನು ಬಹಿಷ್ಕರಿಸಿ ತರಗತಿಗಳಿಂದ ಹೊರನಡೆದಿದ್ದಾರೆ. ನಂಗರ್‌ಹಾರ್ ಮತ್ತು ಕಂದಹಾರ್‌ನಲ್ಲಿ ವಿದ್ಯಾರ್ಥಿಗಳು ತಾಲಿಬಾನ್ ಆದೇಶದ ವಿರುದ್ಧ ಫಲಕಗಳನ್ನು ಪ್ರದರ್ಶಿಸಿದ್ದಾರೆ. ತಾಲಿಬಾನ್‌ನ ಉನ್ನತ ಶಿಕ್ಷಣ ಸಚಿವಾಲಯವು ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲಿನ ಇತ್ತೀಚಿನ ದಬ್ಬಾಳಿಕೆಯಲ್ಲಿ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣದ ಮೇಲೆ ಅನಿರ್ದಿಷ್ಟಾವಧಿಯ ನಿಷೇಧವನ್ನು ಆದೇಶಿಸಿದ್ದು, ಇದು ಅಂತರರಾಷ್ಟ್ರೀಯ ಖಂಡನೆಗೆ ಕಾರಣವಾಗಿದೆ. Male […]