ಸಾಲಿಗ್ರಾಮ: ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರಕ್ಕೆ 50ರ ಸಂಭ್ರಮ; ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮ

ಸಾಲಿಗ್ರಾಮ: ಯಕ್ಷಗಾನದಂತಹ ಕಲಾಪ್ರಕಾರದ ಉಳಿವು ಹಾಗೂ ಬೆಳವಣಿಗೆ ದೃಷ್ಟಿಯಿಂದ ಮಕ್ಕಳನ್ನು ಈ ಕಲೆಯಲ್ಲಿ ತೊಡಗಿಸಿಕೊಂಡು ಮುನ್ನಡೆಯುವುದು ಅತೀ ಆವಶ್ಯಕವಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮಂಗಳವಾರ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಸಂಸ್ಥೆಯ ಐವತ್ತರ ಸಂಭ್ರಮಾಚರಣೆ ಪ್ರಯುಕ್ತ ಹಮ್ಮಿಕೊಂಡ ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮದಲ್ಲಿ ಮೂರನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೃತ್ಯ, ಹಾಡುಗಾರಿಕೆ, ಅಭಿನಯ, ಮಾತು, ವೇಷಭೂಷಣ ಮೊದಲಾದ ಕಲೆಯಿಂದ […]
ಧಾರೇಶ್ವರ ಯಕ್ಷ ಬಳಗದ 8ನೇ ವರ್ಷದ ತಾಳಮದ್ದಲೆ ಸಪ್ತಾಹ ಸಮಾರೋಪ ಸಮಾರಂಭ

ಉಡುಪಿ: ಧಾರೇಶ್ವರ ಯಕ್ಷ ಬಳಗ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರಿನ ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಸೆ.18ರಿಂದ 24ರವರೆಗೆ ನಡೆದ 8ನೇ ವರ್ಷದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭವು ಶನಿವಾರದಂದು ನಡೆಯಿತು. ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಯಕ್ಷಗಾನ ಕಲಾರಂಗಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಅವರ ಕಲಾ ಸೇವೆ ಯಕ್ಷಗಾನ ರಂಗಕ್ಕೆ ಹಾಗೂ ಅಭಿಮಾನಿಗಳಿಗೆ ಇನ್ನಷ್ಟು ಕಾಲ ಸಿಗುವಂತಾಗಬೇಕು ಎಂದರು. […]
ಅಂಬಲಪಾಡಿ: ಹಿರಿಯ ನಾಗರಿಕರನ್ನು ರಂಜಿಸಿದ ಜಾನಪದ ವೈಭವ ಕಾರ್ಯಕ್ರಮ

ಉಡುಪಿ : ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಸಹಕಾರದಲ್ಲಿ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಶನಿವಾರ ನಡೆದ `ಜಾನಪದ ವೈಭವ ‘ ಕಾರ್ಯಕ್ರಮ ಹಿರಿಯ ನಾಗರಿಕರನ್ನು ರಂಜಿಸಿತು. ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿಯ `ಕಲಾಮಯಂ ‘ ಸಾಂಸ್ಕೃತಿಕ ತಂಡ ವೈವಿಧ್ಯಮಯ ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಜಾನಪದ ಲೋಕವನ್ನೇ […]
ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ದೊರೆತಲ್ಲಿ ಶ್ರೇಷ್ಠ ಸಾಧಕರಾಗುವುದು ನಿಶ್ಚಿತ : ಡಾ. ಶಿವರಾಮ್ ಶೆಟ್ಟಿ ತಲ್ಲೂರು

ಉಡುಪಿ : ಇಂದು ಟಿವಿ, ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಮಕ್ಕಳ ಪ್ರತಿಭೆಗೆ ಹೆಚ್ಚಿನ ಅವಕಾಶ ಸಿಗುತ್ತಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ದೇಶಕ್ಕೆ ಒಬ್ಬ ಶ್ರೇಷ್ಠ ಸಾಧಕನನ್ನು ನೀಡಿದಂತಾಗುತ್ತದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಶಿವರಾಮ ಶೆಟ್ಟಿ ತಲ್ಲೂರು ಹೇಳಿದರು. ಅವರು ಭಾನುವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ವತಿಯಿಂದ ಹಮ್ಮಿಕೊಂಡ ಕರ್ನಾಟಕ ಮಕ್ಕಳ ಸಮ್ಮೇಳನದ ಸಮಾರೋಪ […]
ಇಂದು ಸಂಜೆ ಪುರಭವನದಲ್ಲಿ ‘ಜಾನಪದ ಉತ್ಸವ 2022’ ಕಾರ್ಯಕ್ರಮ

ಉಡುಪಿ: ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಘಟಕ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಾಡಿನ ಜಾನಪದ ಕಲೆ ಮತ್ತು ಸಂಸ್ಕೃತಿಗಳನ್ನು ಅನಾವರಣಗೊಳಿಸುವ ‘ಜಾನಪದ ಉತ್ಸವ 2022’ ಕಾರ್ಯಕ್ರಮ ಶನಿವಾರ, ಜೂನ್ 18 ರಂದು ಸಂಜೆ 3:30 ರಿಂದ 1 ಗಂಟೆವರೆಗೆ ಅಜ್ಜರಕಾಡಿನ ಪುರಭವನದಲ್ಲಿ ಜರುಗಲಿದೆ. ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ಜಾನಪದ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಘಟಕಗಳ ಪದಗ್ರಹಣ ಮತ್ತು ಶ್ರೀಮತಿ […]