ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ: ಹೀಗೊಂದು ಅಪರೂಪದ ಆಮಂತ್ರಣ ಪತ್ರಿಕೆ

ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಏನಿರಬಹುದು, ನಾಮ ಸಂವತ್ಸರ , ವಧೂ ವರರ ಹೆಸರು, ಮದುವೆ ನಡೆಯುವ ಸ್ಥಳ, ಇನ್ನೂ ಹೆಚ್ಚೆಂದರೆ ಆಶೀರ್ವಾದವೇ ಉಡುಗೊರೆ ಎಂಬ ಸಂದೇಶ.. ಆದರೆ ಇಲ್ಲೋಂದು ವಿನೂತನ ವಿವಾಹ ಆಮಂತ್ರಣ ಪತ್ರಿಕೆ ಇದೆ, ಇದು  2019 ರ ಲೋಕಸಭಾ ಚುನಾವಣೆಯ ಮಹತ್ವವನ್ನು ಸಾರುತ್ತಿದೆ, ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಮಾಡಿ, ಪ್ರಜಾಪ್ರಭುತ್ವ ಗೆಲ್ಲಿಸಿ, ನಾವು ಮಾರಾಟಕ್ಕಿಲ್ಲ ನಮ್ಮ ಮತ ಮಾರಾಟಕ್ಕಿಲ್ಲ ಎಂಬ ಸಂದೇಶ ಎಲ್ಲ ಬಂಧು ಬಳಗವನ್ನು ತಲುಪುತ್ತಿದೆ. ಮೇ 1 ರಂದು ತಲ್ಲೂರು ಪಾರ್ತಿಕಟ್ಟೆ  […]