ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯ ಕುರಿತು ಆಕ್ಷೇಪಣೆ ಆಹ್ವಾನ

ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯವನ್ನು ಪ್ರಕಟಿಸಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಜನವರಿ 16 ಸಂಜೆ 5 ಗಂಟೆಯ ಒಳಗೆ ಆನ್‌ಲೈನ್ https://rdpr.karnataka.gov.in/rdc/public/ಮೂಲಕ ಅಥವಾ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು ಇವರಿಗೆ ಖುದ್ದಾಗಿ […]
ಜಿ.ಪಂ/ತಾಲೂಕು ನಿರ್ವಹಣಾ ಘಟಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಅಭಿಯಾನ ನಿರ್ವಾಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ zpudupi.karnataka.gov.in ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಮೊ.ನಂ: 9480878002 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಜುಲೈ 29 ರಂದು ಉಡುಪಿ ತಾ.ಪಂ ಸಾಮಾನ್ಯ ಸಭೆ

ಉಡುಪಿ: ಉಡುಪಿ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯು ಜುಲೈ 29 ರಂದು ಬೆಳಗ್ಗೆ 11.30 ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಆಡಳಿತ ಅಧಿಕಾರಿ ಬಾಬು ಎಮ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.