ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ ಪ್ರಕರಣ: ಮೂವರು ಆರೋಪಿಗಳ ಬಂಧನ
ಬಂಟ್ವಾಳ: ತಾಲೂಕಿನ ಫರಂಗಿಪೇಟೆಯ ಫೋಟೋಗ್ರಾಫರ್, ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಕೊಟ್ಟಿಂಜ ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಅಮ್ಮೆಮ್ಮಾರು ನಿವಾಸಿಗಳಾದ ಮಹಮ್ಮದ್ ಅರ್ಷದ್(19), ಅಬ್ದುಲ್ ರೆಹಮಾನ್ (22) ಮತ್ತು ಮಹಮ್ಮದ್ ಸೈಫುದ್ದೀನ್(22) ಬಂಧಿತ ಆರೋಪಿಗಳು. ಇನ್ನೊಬ್ಬ ಆರೋಪಿ ಸವಾದ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಫರಂಗಿಪೇಟೆಯಲ್ಲಿ ಫೋಟೋ ಸ್ಟುಡಿಯೋವೊಂದನ್ನು ನಡೆಸುತ್ತಿದ್ದ ದಿನೇಶ ಅವರ ಮೇಲೆ ಬುಧವಾರ ರಾತ್ರಿ ಏಕಾಏಕಿಯಾಗಿ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ […]