ತಂಬಾಕು ಕಂಪೆನಿಗಳೊಂದಿಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಬೇಡಿ: ಜಿಲ್ಲಾಧಿಕಾರಿ

ಉಡುಪಿ, ಜುಲೈ 9: ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಉಡುಪಿ ಜಿಲ್ಲೆ ಇದರ ತ್ರೈಮಾಸಿಕ […]

ಮೇ 31: ವಿಶ್ವ ತಂಬಾಕು ರಹಿತ ದಿನ

ಉಡುಪಿ, ಮೇ 29: ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಎಂಬ ಘೋಷವಾಕ್ಯದಡಿಯಲ್ಲಿ ಮೇ 31 ರಂದು ಬೆಳಗ್ಗೆ 10 ಕ್ಕೆ ಕಾರ್ಕಳ ತಾಲೂಕಿನ ಬಜಗೋಳಿ […]

ಕಾರ್ಕಳ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

ಉಡುಪಿ, ಮೇ 25: ಉಡುಪಿ ಜಿಲ್ಲೆಯಲ್ಲಿ COTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಕಾರ್ಕಳ ಬಸ್ ನಿಲ್ದಾಣ ಮತ್ತು ಕೋರ್ಟ್ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‍ಗಳು, ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 44 ಪ್ರಕರಣ ದಾಖಲಿಸಿ 5000 ರೂ. ದಂಡ ವಸೂಲಿ ಮಾಡಲಾಗಿದೆ. ಅದರಂತೆ ಸೆಕ್ಷನ್ 4, 6 (ಎ) ಮತ್ತು […]