ಹೊಸ ಸಂಸತ್ ಭವನದಲ್ಲಿರಲಿದೆ ಸ್ವಾತಂತ್ರ್ಯದ ಪ್ರತೀಕವಾದ ಸೆಂಗೋಲ್: ಚೋಳ ರಾಜರ ಕಾಲದ ರಾಜದಂಡ ಹಸ್ತಾಂತರ ಪದ್ದತಿಗೆ ಪುನರ್ಜೀವ

ನವದೆಹಲಿ: ಬುಧವಾರದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂಬರುವ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್ ಸ್ಥಾನದ ಪಕ್ಕದಲ್ಲಿ ತಮಿಳುನಾಡಿನ ಐತಿಹಾಸಿಕ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಹೇಳಿದರು. “ಸೆಮ್ಮೈ” ಎಂಬ ತಮಿಳು ಪದದಿಂದ ಹುಟ್ಟಿಕೊಂಡಿರುವ ಸೆಂಗೋಲ್ ಪದದ ಅರ್ಥ “ಸದಾಚಾರ” ಎಂದಾಗಿದೆ. ಈ ರಾಜದಂಡವು ಸ್ವಾತಂತ್ರ್ಯದ ” ಐತಿಹಾಸಿಕ ಮಹತ್ವದ” ಸಂಕೇತವಾಗಿದೆ ಏಕೆಂದರೆ ಇದು ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ವರ್ಗಾವಣೆಯನ್ನು ಸೂಚಿಸುತ್ತದೆ ಎಂದು ಶಾ […]

ಕಾಶಿ-ತಮಿಳು ಸಂಗಮ ಕಾರ್ಯಕ್ರಮ ದೇಶವನ್ನು ಏಕಸೂತ್ರದಲ್ಲಿ ಬೆಸೆಯುವ ಪ್ರಯತ್ನ: ಪ್ರಧಾನಿ ಮೋದಿ

ವಾರಣಾಸಿ: ಇಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾಶಿ-ತಮಿಳು ಸಂಗಮವನ್ನು ಶನಿವಾರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಶಿ-ತಮಿಳು ಸಂಗಮವು ಗಂಗಾ-ಯಮುನಾ ಸಂಗಮದಷ್ಟು ಪವಿತ್ರವಾಗಿದೆ ಎಂದು ಹೇಳಿದರು. ತಮಿಳಿನ ರೂಪದಲ್ಲಿ ಪ್ರಪಂಚದ ಅತ್ಯಂತ ಹಳೆಯ ಭಾಷೆ ನಮ್ಮಲ್ಲಿದೆ ಎಂಬುದು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ. ಈ ಪರಂಪರೆಯನ್ನು ಉಳಿಸುವುದರ ಜೊತೆಗೆ ಶ್ರೀಮಂತಗೊಳಿಸಬೇಕು. ಕಾಶಿ-ತಮಿಳು ಸಂಗಮ ಕಾರ್ಯಕ್ರಮವು ಶತಮಾನಗಳ-ಹಳೆಯ ಜ್ಞಾನದ ಬಂಧ ಮತ್ತು ಉತ್ತರ ಮತ್ತು ದಕ್ಷಿಣದ ನಡುವಿನ ಪ್ರಾಚೀನ ನಾಗರಿಕತೆಯ ಸಂಬಂಧವನ್ನು ಮರುಶೋಧಿಸುವ ಗುರಿಯನ್ನು ಹೊಂದಿದೆ. ಭಾಷೆಯ ಆಧಾರದ […]

ಭಾರತೀಯ ಚಿತ್ರರಂಗದ ಮಹಿಳಾ ಸೂಪರ್ ಸ್ಟಾರ್ ಬಾಹುಬಲಿಯ ದೇವಸೇನೆಗೆ ಹುಟ್ಟುಹಬ್ಬದ ಸಂಭ್ರಮ

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿ, ಮಹಿಳಾ ಸೂಪರ್ ಸ್ಟಾರ್ ಎಂದೇ ಕರೆಯಲ್ಪಡುವ ಬಾಹುಬಲಿಯ ದೇವಸೇನೆ ಪಾತ್ರಧಾರಿ ಅನುಷ್ಕಾ ಶೆಟ್ಟಿಗೆ ಇಂದು 41 ನೇ ಹುಟ್ಟುಹಬ್ಬದ ಸಂಭ್ರಮ. ಅತಿ ಹೆಚ್ಚು ಸಂಭಾವನೆ ಪಡೆಯುವ ದಕ್ಷಿಣ ಭಾರತದ ನಟಿಯರಲ್ಲಿ ಒಬ್ಬರಾಗಿರುವ ಅನುಷ್ಕಾ ಪ್ರತಿ ಚಲನಚಿತ್ರಕ್ಕೆ 2 ರಿಂದ 3 ಕೋಟಿ ರೂ ಸಂಭಾವನೆ ಪಡೆಯುತ್ತಾರೆ ಎನ್ನಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಿಪಾಡಿ ಗ್ರಾಮದ ತುಳುವ ಬಂಟ ಕುಟುಂಬದ ಪ್ರಫುಲ್ಲ ಶೆಟ್ಟಿ ಮತ್ತು ಎ.ಎನ್.ವಿಟ್ಟಲ್ ಶೆಟ್ಟಿಯವರ ಮೂರು ಮಕ್ಕಳಲ್ಲಿ […]

ಪ್ರಚಾರದ ವೇಳೆ ಹೃದಯಾಘಾತ: ನಟ, ಮಾಜಿ ಸಂಸದ ಜೆ.ಕೆ.ರಿತೇಶ್ ವಿಧಿವಶ

ಚೆನ್ನೈ: ತಮಿಳು ಭಾಷಾ ಸಿನಿಮಾ ನಟ, ಮಾಜಿ ಸಂಸದ, ಎಐಎಡಿಎಂಕೆ ನಾಯಕ ಜೆ.ಕೆ.ರಿತೇಶ್ (46) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಜೆ.ಕೆ.ರಿತೇಶ್ ಅವರು ಗುರುವಾರ ತಮಿಳುನಾಡಿನ ರಾಮನಾಥಪುರಂನಲ್ಲಿ ಎಐಎಡಿಎಂಕೆ ಮೈತ್ರಿ ಪಕ್ಷ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗವಹಿಸಿದ್ದರು. ಆಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಪಕ್ಷದ ನಾಯಕರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಜೆ.ಕೆ.ರಿತೇಶ್ ಅವರು ಡಿಎಂಕೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆಗ ಅವರು […]