7 ಮಂದಿ ದಾರುಣ ಸಾವು : ತಮಿಳುನಾಡಿನ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ

ಅರಿಯಲೂರು (ತಮಿಳುನಾಡು): ಕರ್ನಾಟಕದ ಅತ್ತಿಬೆಲೆಯಲ್ಲಿ ನಡೆದ ದುರ್ಘಟನೆ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಂತಹುದೇ ಘಟನೆಯೊಂದು ವರದಿಯಾಗಿದೆ.ತಮಿಳುನಾಡಿನ ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಬೆಳಗ್ಗೆ 9:30ರ ಸುಮಾರಿಗೆ ಪಟಾಕಿ ತಯಾರಿಸುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ರಾಜೇಂದ್ರನ್​ ಎಂಬುವರು. ವೀರಕಲೂರು ಗ್ರಾಮದಲ್ಲಿ ಯಾಜ್ ಕ್ರ್ಯಾಕರ್ಸ್ ಎಂಬ ಅಂಗಡಿಯನ್ನು ನಡೆಸುತ್ತಿದ್ದು, […]