ನಾಟ್ಯಶಾಸ್ತ್ರದ 108 ಕರಣಗಳ ಯಶಸ್ವಿ ಪ್ರದರ್ಶನ: ತನುಶ್ರೀ ಮುಡಿಗೆ 8ನೇ ವಿಶ್ವದಾಖಲೆ

ಉಡುಪಿ: ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ 7 ವಿಶ್ವದಾಖಲೆಗಳನ್ನು ಮುಡಿಗೇರಿಸಿಕೊಂಡಿರುವ ಉಡುಪಿಯ ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್ ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾದರು. ಕಾಲು, ಕೈಗಳ ಚಲನೆ, ದೇಹದ ಭಂಗಿ ಈ ಮೂರು ಅಂಶಗಳ ಸಂಯೋಜನೆ 108 ಕರಣಗಳಾಗಿವೆ. ಭಗವಂತ ಶಿವ […]