ತಪೋವನಿ ಮಾತಾಜಿ ನಿಧನ

ಉಡುಪಿ: ಮೂಲತಃ ಉಡುಪಿಯ ಪಂದುಬೆಟ್ಟಿನವರಾಗಿದ್ದ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟಿದ್ದ ಆಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ಯಾನೆ ಸುಭದ್ರಾ ಮಾತಾಜಿ (89) {ಮೂಲ ಹೆಸರು ವಾರಿಜಾಕ್ಷಿ} ಗುರುವಾರ ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬಾಲ್ಯದಲ್ಲೇ ಅಧ್ಯಾತ್ಮದ ಸೆಳೆತಕೊಕ್ಕೊಳಗಾಗಿ ಉಡುಪಿಯ ಮಠ ಮತ್ತು ದೇವಾಲಯದ ಪರಿಸರದಲ್ಲೇ ಭಜನೆ ಪ್ರವಚನ ಸತ್ಸಂಗ ಮೊದಲಾದವುಗಳಲ್ಲಿ ಭಾಗಿಯಾಗುತ್ತಿದ್ದ ಸುಭದ್ರಾ ಅವರು, ಮುಂದೆ ಪೇಜಾವರ ಶ್ರೀಗಳಲ್ಲಿ ಮಂತ್ರೋಪದೇಶ ಪಡೆದು ಅಧ್ಯಾತ್ಮ ಸಾಧನೆಗಾಗಿ […]