ಅಗ್ನಿ V ಕ್ಷಿಪಣಿ ಯಶಸ್ವಿ ಪರೀಕ್ಷೆ: ಉತ್ತರ ಚೀನಾ ವ್ಯಾಪ್ತಿವರೆಗೂ ನಿಖರ ಗುರಿ ಸಾಧಿಸುವ ಸಾಮರ್ಥ್ಯ ಸಾಬೀತು

ನವದೆಹಲಿ: ಭಾರತವು ಗುರುವಾರ ಅತ್ಯಂತ ಹೆಚ್ಚಿನ ನಿಖರತೆಯೊಂದಿಗೆ 5,000 ಕಿಲೋಮೀಟರ್ ವ್ಯಾಪ್ತಿಯ ಗುರಿಗಳನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿರುವ ಪರಮಾಣು ಸಾಮರ್ಥ್ಯದ ಅಗ್ನಿ V ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಭಾರತವು ಅಗ್ನಿ V ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ರಾತ್ರಿ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಡಿ. 9 ರಂದು ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಇದೀಗ ಅಗ್ನಿ V ಕ್ಷಿಪಣಿಯ ಯಶಸ್ವಿ ಪರೀಕ್ಷೆಯು […]
ತವಾಂಗ್ ನಲ್ಲಿ 300 ಕ್ಕೂ ಹೆಚ್ಚು ಚೀನೀ ಸೈನಿಕರ ಜೊತೆ ಕಾದಾಡಿ ಹಿಮ್ಮೆಟಿಸಿದ ಭಾರತೀಯ ಸೈನಿಕರು

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆ ಬಗ್ಗೆ ಮಂಗಳವಾರ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಲಾಗಿದ್ದು, ಗಡಿಯಲ್ಲಿನ ಪರಿಸ್ಥಿತಿಯ ಕುರಿತು ಹಲವಾರು ಕಾಂಗ್ರೆಸ್ ಸಂಸದರು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ಪ್ರದೇಶದ ಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಚೀನಾದ ಪಿಎಲ್‌ಎಯ ಪ್ರಯತ್ನಗಳನ್ನು ಭಾರತೀಯ ಸೇನೆ ಧೈರ್ಯದಿಂದ ತಡೆದಿದೆ ಮತ್ತು ಅದನ್ನು ದೃಢವಾಗಿ ಎದುರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ […]