ಮೂಡುಬಿದಿರೆ: ವಿದ್ಯಾಗಮ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕೊರೊನಾಗೆ ಬಲಿ
ಮೂಡಬಿದಿರೆ: ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿ ಪದ್ಮಾಕ್ಷಿ ಎನ್ ಅವರು ಇಂದು ಕೊರೊನಾ ಸೋಂಕಿನಿಂದ ನಿಧನ ಹೊಂದಿದರು. ಅವರಿಗೆ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುವಾಗ ಕೊರೊನಾ ಸೋಂಕು ತಗಲಿತ್ತು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಪದ್ಮಾಕ್ಷಿಯವರ ಪತಿಗೆ ಸಹ ಕೊರೋನಾ ಸೋಂಕು ತಗುಲಿದೆ. ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆಯಿಂದ ಅವರೀಗ ಚೇತರಿಸಿಕೊಂಡಿದ್ದಾರೆ. […]