ಕಾಜಾರಗುತ್ತು ಸರಕಾರಿ ಶಾಲೆಯ ಶಿಕ್ಷಕ- ರಕ್ಷಕ ಸಭೆ
ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ- ರಕ್ಷಕ ಸಭೆ ನಡೆಯಿತು. ಆನ್ ಲೈನ್ ಕ್ಲಾಸ್ ಗಳ ಬಗ್ಗೆ ಹೆತ್ತವರೊಂದಿಗೆ ಚರ್ಚಿಸಲಾಯಿತು. ಈ ವೇಳೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ದೇವೇಂದ್ರ ನಾಯಕ್, ಎಸ್ ಡಿ ಎಂ ಸಿ ಅಧ್ಯಕ್ಷ ವಿಷ್ಣುಮೂರ್ತಿ ಶೆವ್ಡೆ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುದರ್ಶನ್ ಶೆಟ್ಟಿ ಉಪಸ್ಥಿತರಿದ್ದರು.