ಕುಂದಾಪುರ:ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕುಂದಾಪುರ: ಹೆಚ್ಚುವರಿ ಹೆಸರಿನಲ್ಲಿ ಶಿಕ್ಷಕರ ವರ್ಗಾವಣೆಗೆ ಮುಂದಾದ ಶಿಕ್ಷಣ ಇಲಾಖೆಯ ವಿರುದ್ದ ಬೈಂದೂರಿನ ಉಪ್ಪುಂದ ಸರ್ಕಾರಿ ಪ್ರೌಢ ಶಾಲಾ ೬೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಶುಕ್ರವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಉಪ್ಪುಂದ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು ೬೧೨ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದು, ೧೬ ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದರು. ಉಪ್ಪುಂದ ಪ್ರೌಢ ಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು, ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವೂ ಬಂದಿತ್ತು. ಇದೀಗ ಶಿಕ್ಷಣ ಇಲಾಖೆ ಏಕಾಏಕಿಯಾಗಿ ಹೆಚ್ಚುವರಿ ಕಾರಣ ನೀಡಿ […]