ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ರಘುಪತಿ ಭಟ್

ಉಡುಪಿ: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು. ಈ ವೃತ್ತಿಯಲ್ಲಿ ಸಿಗುವ ಗೌರವ, ಪ್ರೀತಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುದರಲ್ಲಿ  ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಶನಿವಾರ ಉಡುಪಿಯ ಸೈಂಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ , ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಹಾಗೂಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು […]