ಸಂಭ್ರಮದಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಕರು
ರಾಜ್ಯದಾದ್ಯಂತ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಅಂತ್ಯವಾಗಿದ್ದು, ಶಾಲೆ ಪ್ರಾರಂಭವಾಗಿದೆ. ಇನ್ನು ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಒಂದಷ್ಟು ಮಾರ್ಗಸೂಚನೆಗಳನ್ನು ನೀಡಿದೆ. ಅದರಲ್ಲಿ ಪ್ರಾರಂಭೋತ್ಸವ ನಡೆಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು. ಮೊದಲ ದಿನ ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಹಾಗೆಯೇ ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ. ಅದರಂತೆ ಎಲ್ಲಾ ಶಾಲೆಯಲ್ಲೂ ಸಂಭ್ರಮ ಆಚರಣೆ ನಡೆದಿದೆ. ಮಕ್ಕಳನ್ನು ಶಾಲೆಯ ಶಿಕ್ಷಕರು, ಗ್ರಾಮಸ್ತರು ಸ್ವಾಗತಿಸಿದರು.