ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಆಯೋಜನೆ
ನಿಟ್ಟೆ: ಇಂದು ನಾವು ತಂತ್ರಜ್ಞಾನದ ವಿಚಾರವಾಗಿ ಎಷ್ಟೇ ಮುಂದುವರಿದಿದ್ದರೂ ಪ್ರತಿಯೋರ್ವ ಜೀವಿಗೆ ಅಗತ್ಯವಿರುವ ರಕ್ತದಂತಹ ವಸ್ತುವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ರಕ್ತದ ಮಹತ್ವ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಅಗತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ ಘಟಕದ ಅಧ್ಯಕ್ಷ ಡಾ. ಕೆ.ಆರ್ ಜೋಷಿ ಹೇಳಿದರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ […]
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಕೂಟಕ್ಕೆ ಚಾಲನೆ
ನಿಟ್ಟೆ: ವಿದ್ಯಾರ್ಥಿದೆಸೆಯಲ್ಲಿ ಕ್ರೀಡೆಗೆ ಉತ್ತಮ ಪ್ರೋತ್ಸಾಹ ಸಿಕ್ಕರಷ್ಟೇ ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಕ್ರೀಡೆಯೆಂಬುದು ಸ್ನೇಹಕ್ಕಾಗಿ ಹಾಗೂ ವಿನೋದಕ್ಕಾಗಿಯೂ ಆಡಬಹುದು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡರೆ ನಿರಾಸೆಯೆಂಬ ಅಂಶ ನಮ್ಮೊಳಗೆ ಸೇರುವುದಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯದ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ವಿಜಯ ಆಳ್ವ ಅಭಿಪ್ರಾಯಪಟ್ಟರು. ಗುರುವಾರದಂದು ಎನ್.ಇ.ಟಿ ಕ್ಯಾಂಪಸ್‌ನ ಬಿ.ಸಿ.ಆಳ್ವಾ ಕ್ರೀಡಾ ಸಂಕೀರ್ಣದಲ್ಲಿ ನಡೆದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 36 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ಪರ್ಧೆ ಅಂದಮೇಲೆ […]