ಆಂತರಿಕ ಭದ್ರತೆಗೆ ಆಧುನಿಕ ತಂತ್ರಜ್ಞಾನ ಬಳಕೆ: ಭಾಸ್ಕರ್ ರಾವ್
ಉಡುಪಿ: ರಾಜ್ಯದ ಆಂತರಿಕ ಭದ್ರತೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ರಾಜ್ಯದ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ತಿಳಿಸಿದ್ದಾರೆ. ಮಲ್ಪೆಯ ಕರಾವಳಿ ಕವಲು ಪಡೆಯ ಕಚೇರಿಯಲ್ಲಿ ಮೀನುಗಾರ ಮುಖಂಡರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವುದರ ಮೂಲಕ ರಾಜ್ಯದ ಅಂತರಿಕ ಭದ್ರೆತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕರಾವಳಿ ಕಾವಲು ಪಡೆಗೆ ಅಗತ್ಯ ಉಪಕರಣಗಳ ಖರೀದಿ, ಪ್ರತ್ಯೇಕ ಸಿಬ್ಬಂದಿ ನೇಮಕ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.ಸಿಬ್ಬಂದಿಗಳಲ್ಲಿ ದೈಹಿಕ […]