ಪೊಲಿಪು: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ

ಉಡುಪಿ: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ ಹಾಗೂ 82ನೇ ವಾರ್ಷಿಕ ಭಜನಾ ಮಂಗಳೋತ್ಸವ ದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ವಹಿಸಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ […]

ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳ ಜೀರ್ಣೋದ್ಧಾರ: ವೀರೇಂದ್ರ ಹೆಗ್ಗಡೆಯವರಿಂದ ರೂ. 25 ಲಕ್ಷ ದೇಣಿಗೆ

ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ, ಪದ್ಮವಿಭೂಷಣ ರಾಜರ್ಷಿ ಡಾll ಡಿ. ವೀರೇಂದ್ರ ಹೆಗ್ಗಡೆಯವರು ರೂ. 25 ಲಕ್ಷ ದೇಣಿಗೆ ನೀಡಿದ್ದಾರೆ. ಸೋಮವಾರದಂದು ಸಮಗ್ರ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಹಾಗೂ ದೇವಸ್ಥಾನದ ಮಂಡಳಿಗೆ ದೇಣಿಗೆಯ ಚೆಕ್ ಅನ್ನು ಹೆಗ್ಗಡೆಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಗಿರೀಶ್ […]