ಪೂರ್ಣಗೊಂಡಿರುವ ರಸ್ತೆ ಕಾಮಗಾರಿಗೆ ಮತ್ತೆ ಟೆಂಡರ್ ಆರೋಪ; ಉಡುಪಿ ನಗರಸಭೆಯ ವಿರುದ್ಧ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ದೂರು
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಸಂಪೂರ್ಣಗೊಂಡಿರುವ ಲಕ್ಷಾಂತರ ರೂ. ರಸ್ತೆ ಕಾಮಗಾರಿಗೆ ನಗರಸಭೆ ಮತ್ತೊಮ್ಮೆ ಟೆಂಡರ್ ಕರೆದಿದೆ. ಇದಕ್ಕೆ ಕೂಡಲೇ ತಡೆಯಾಜ್ಞೆ ನೀಡಿ, ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವೀಕರಿಸಿದರು. ಉಡುಪಿ ನಗರಸಭೆಯು ಜ.29ರಂದು 17 ಕಾಮಗಾರಿಗಳಿಗೆ ಟೆಂಡರ್ ಪ್ರಕಟಣೆ ಹೊರಡಿಸಿದ್ದು, ಆ ಪೈಕಿ ಕುಂಜಿಬೆಟ್ಟು […]