ತೆಂಕನಿಡಿಯೂರು: ಸಹಾಯ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಸಾಧಕರಿಗೆ ಸನ್ಮಾನ
ಮಲ್ಪೆ: ಸಹಾಯ ಸೌಹಾರ್ದ ಸಹಕಾರಿ ನಿಯಮಿತ ಇದರ ತೆಂಕನಿಡಿಯೂರು ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ಮುಳುಗು ತಜ್ಞ ಈಶ್ವರ್ ಮಲ್ಪೆ ನಿತ್ಯಾನಂದ ಒಳಕಾಡು ಅವರನ್ನು ಸಹಕಾರಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು. ದ.ಕ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ, ತೊಟ್ಟಂ ಸೈಂಟ್ ಆನ್ಸ್ ಚರ್ಚ್ ಧರ್ಮಗುರು ಫಾ| ಡೆನಿಸ್ ಡೇಸಾ, ಜಿಲ್ಲಾ ಕೋ- ಆಪರೇಟಿವ್ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, […]
ತೆಂಕನಿಡಿಯೂರು ಕಾಲೇಜಿನಲ್ಲಿ ಇತಿಹಾಸ ಎಂ.ಎ. ಉದ್ಘಾಟನೆ
ಉಡುಪಿ, ಜುಲೈ 19: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇಲ್ಲಿ ಇತಿಹಾಸ ಸ್ನಾತಕೋತ್ತರ ಅಧ್ಯಯನ ಜುಲೈ 17 ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜನಾರ್ಧನ ತೋನ್ಸೆ ನೆರವೇರಿಸಿ ಶುಭ ಹಾರೈಸಿದರು. ಶಿರ್ವ ಸೈಂಟ್ ಮೆರೀಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ಮಾತನಾಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಸತತ ಅಧ್ಯಯನ ಶೀಲರಾದರೆ ಯಶಸ್ಸು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ […]