ಬೀದಿ ನಾಟಕದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ: ಬಾಲಕೃಷ್ಣ ಹೆಗ್ಡೆ

ಉಡುಪಿ: ಬೀದಿ ನಾಟಕಗಳ ಮೂಲಕ ಸಾಮಾಜಿಕ ಪರಿವರ್ತನೆ ಮಾಡಲು ಸಾಧ್ಯವಿದೆ. ವಿದ್ಯಾರ್ಥಿಗಳು ಬೀದಿ ನಾಟಕಗಳ ಮೂಲಕ ಸಮಾಜದಲ್ಲಿ ಜನಜಾಗೃತಿ ಮೂಡಿಸಿ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ಎಸ್‌. ಬಾಲಕೃಷ್ಣ ಹೆಗ್ಡೆ ಹೇಳಿದರು. ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಿದ ಎರಡು ದಿನಗಳ ರಂಗ ತರಬೇತಿ ಶಿಬಿರವನ್ನು ಉದ್ಘಾಟಿಸಿ […]