ತೆಂಕಪೇಟೆ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ

ಉಡುಪಿ: ತೆಂಕಪೇಟೆ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಜಿ ಎಸ್ ಬಿ ಸಮಾಜ, ಯುವಕ ಹಾಗೂಮಹಿಳಾ ಮಂಡಳಿಯ ಆಶ್ರಯದಲ್ಲಿ, ಕಾರ್ತಿಕ ಮಾಸದ ಏಕಾದಶಿ ಅಂಗವಾಗಿ ಗುರುವಾರ ಭಜನಾ ಕಾರ್ಯಕ್ರಮ ಹಾಗೂ ಶುಕ್ರವಾರ ಮುಂಜಾನೆ ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ವಿಶ್ವ ರೂಪ ದರ್ಶನ ನೆರವೇರಿತು. ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಶ್ರೀರಾಮ ದರ್ಶನ, ವೀರ ವಿಠಲ, ಶ್ರೀ ಕೃಷ್ಣ, ಗಜವದನ, ಈಶ್ವರ, ಮುಖ್ಯಪ್ರಾಣ ಹಾಗೂ ರಂಗೋಲಿಯಲ್ಲಿ ವಿವಿಧ ಬಗೆಯ ಚಿತ್ತಾರ, ಹೂಗಳಿಂದ ರಚಿಸಿದ ರಂಗೋಲಿ, […]