2024-25ನೇ ಸಾಲಿನ 1 ರಿಂದ10ನೇ ತರಗತಿಯವರೆಗಿನ ಪರಿಷ್ಕೃತ ಪಠ್ಯಪುಸ್ತಕ ಬಿಡುಗಡೆ

ಬೆಂಗಳೂರು: ಕರ್ನಾಟಕ ಪಠ್ಯಪುಸ್ತಕ ಸಮಿತಿಯು 2024-25ನೇ ಸಾಲಿನ 1 ರಿಂದ10ನೇ ತರಗತಿಯವರೆಗೆ ಪಠ್ಯಪುಸ್ತಕಗಳಲ್ಲಿ ಮಾಡಿರುವ ಬದಲಾವಣೆಗಳ ವರದಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಈ ಬಗ್ಗೆ ಅಧಿಕಾರಿಗಳು ದೊಡ್ಡ ಘೋಷಣೆ ಮಾಡದೆ ಸದ್ದಿಲ್ಲದೆ ಸಂಜೆ ತಡವಾಗಿ ಅಧಿಸೂಚನೆ ಹೊರಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ನಿವೃತ್ತ ಇತಿಹಾಸ ಪ್ರಾಧ್ಯಾಪಕ ಮಂಜುನಾಥ ಹೆಗಡೆ ನೇತೃತ್ವದಲ್ಲಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005 ಕ್ಕೆ ಪೂರಕವಾಗಿ ಪಠ್ಯಕ್ರಮದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಪಠ್ಯ ಪುಸ್ತಕದಲ್ಲಿ ರಾಜ್ಯದ ಸಾಂಸ್ಕೃತಿಕ ನಾಯಕರನ್ನು ಕೇಂದ್ರೀಕರಿಸಿ ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಒತ್ತು […]

ಮತಾಂತರ ನಿಷೇಧ ತಿದ್ದುಪಡಿ ರದ್ದು; ಪಠ್ಯ ಬದಲಾವಣೆ: ಕಾಂಗ್ರೆಸ್ ವಿರುದ್ದ ಹರಿಹಾಯ್ದ ಸುನಿಲ್ ಕುಮಾರ್

ಕಾರ್ಕಳ : ರಾಷ್ಟ್ರಭಕ್ತರಾದ ವೀರ್ ಸಾವರ್ಕರ್‌ ಮತ್ತು ಹೆಡ್ಗೆವಾರ್ ಅವರ ಕುರಿತಾದ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ‌ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ? ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಸಂಪುಟದಲ್ಲಿ ತೆಗೆದುಕೊಂಡ ಈ ಎರಡು ನಿರ್ಣಯದ ವಿರುದ್ಧ […]

ಶಾಲಾ ಪಠ್ಯ ಪುಸ್ತಕ ವಿವಾದ: ಸರಿಪಡಿಸಿದ ಪಠ್ಯ ಪುಸ್ತಕಗಳನ್ನು ಉಚಿತ ಬುಕ್‌ಲೆಟ್ ರೂಪದಲ್ಲಿ ನೀಡಲು ನಿರ್ಧಾರ

ಬೆಂಗಳೂರು: ಪಠ್ಯಪುಸ್ತಕದಲ್ಲಿ ಕಂಡು ಬಂದ ತಪ್ಪುಗಳನ್ನು ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಿ ವಿತರಣೆ ಮಾಡಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಹೊಸ ಪಠ್ಯಪುಸ್ತಕಗಳನ್ನು ಮುದ್ರಿಸಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಬುಕ್ ಲೆಟ್ ರೂಪದಲ್ಲಿ ವಿತರಿಸಲು ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯು ತೀರ್ಮಾನಿಸಿದೆ. ತಿದ್ದುಪಡಿ ಮಾಡಿದ ಅಂಶಗಳ ಸಾಫ್ಟ್‌ ಪ್ರತಿಗಳನ್ನು ಜಾಲತಾಣದಲ್ಲಿ ಪ್ರಕಟಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈಗಾಗಲೇ ಪರಿಷ್ಕರಿಸಿರುವ ಪಠ್ಯಪುಸ್ತಕಗಳಲ್ಲಿ ಬಿಟ್ಟುಹೋದ ಅಂಶಗಳನ್ನು […]

ಶಾಲಾ ಪಠ್ಯ ಪುಸ್ತಕಗಳ ಕೇಸರೀಕರಣ ವಿವಾದ: ಮಕ್ಕಳಿಗೆ ‘ನೈಜ ಇತಿಹಾಸ’ ಕಲಿಸುತ್ತೇವೆ ಎಂದ ಶಿಕ್ಷಣ ಸಚಿವ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳ ವಿವಾದಾತ್ಮಕ ಪರಿಷ್ಕರಣೆ ಕುರಿತು ಮೌನ ಮುರಿದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ “ನೈಜ” ಇತಿಹಾಸವನ್ನು ಕಲಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣವನ್ನು ಕೇಸರಿಕರಣಗೊಳಿಸುವ ಆರೋಪವನ್ನು ತಳ್ಳಿಹಾಕಿದ ಅವರು, “ಕೆಲವು ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಪರಿಷ್ಕೃತ ಪಠ್ಯಪುಸ್ತಕಗಳನ್ನು ನೋಡದೆಯೆ ಜಾತಿ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ. ಬರಗೂರು ರಾಮಚಂದ್ರಪ್ಪ ನೇತೃತ್ವದ ಹಿಂದಿನ ಸಮಿತಿಯು ಪರಿಷ್ಕರಿಸಿದ ಪಠ್ಯಪುಸ್ತಕಗಳು ಸುಳ್ಳು ಮತ್ತು ತಪ್ಪು […]