ಉಡುಪಿಯಲ್ಲಿ 224ನೇ ಸಂಗೊಳ್ಳಿ ರಾಯಣ್ಣರ ಜಯಂತ್ಯೋತ್ಸವ ಆಚರಣೆ
ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇದರ ವತಿಯಿಂದ 224ನೇ ಸಂಗೊಳ್ಳಿ ರಾಯಣ್ಣರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉಡುಪಿಯಲ್ಲಿ ಆಯೋಜಿಸಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಲದ ಆಧ್ಯಕ್ಷ ಯಶ್ ಪಾಲ್ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಮಸೇನೆಯ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಸಂಗೊಳ್ಳಿ ರಾಯಣ್ಣ ಸಂಘದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಪತ್ರಿಕಾ ಛಾಯಾಗ್ರಾಹಕ ಜನಾರ್ಧನ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.