ಉಜಿರೆಯ ಬಾಲಕನ ಅಪಹರಣ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಬೆಳ್ತಂಗಡಿ: ಉಜಿರೆಯ ಬಾಲಕ ಅನುಭವ್ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಬೆಳ್ತಂಗಡಿ ಪೋಲೀಸರು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಚಾಮರಾಜನಗರ ನಿವಾಸಿ ನವೀನ್(28) ಬಂಧಿತ ಆರೋಪಿ. ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ ಅನುಭವ್( 8) ಅವರನ್ನು ದುಷ್ಕರ್ಮಿಗಳ ತಂಡವೊಂದು ಅಪಹರಣ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿತ್ತು. ಬೆಳ್ತಂಗಡಿ ಪೊಲೀಸರು ಎರಡು ದಿನಗಳೊಳಗೆ ಕೋಲಾರದ ಮನೆಯೊಂದರಲ್ಲಿ ಮಗುವನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ರಕ್ಷಿಸಿ, 6 ಮಂದಿ ಅಪಹರಣಕಾರರನ್ನು ಬಂಧಿಸಿದ್ದರು. ಈ […]