ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದ ಆರೋಪಿಯ ಬಂಧನ
ಮಂಗಳೂರು: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಶೌಚಾಲಯದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ ಕಾಮುಕನೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆ, ಸ್ನಾನ ಮಾಡಲೆಂದು ತೆರಳಿದ್ದ ವೇಳೆ ಆರೋಪಿ ಮುನೀರ್ ತನ್ನ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆಹಿಡಿದಿದ್ದನು. ಇದನ್ನು ಗಮನಿಸಿದ ಮಹಿಳೆಯು ಹೊರಬರುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದನು. ಬಳಿಕ ಮಹಿಳೆ ಜ. 20ರಂದು ಉಳ್ಳಾಲ ಪೊಲೀಸ್ […]