ರಾಜ್ಯಗಳು ಒಪ್ಪಿದರೆ ಶಾಲೆಗಳಲ್ಲಿ ಭಗವದ್ಗೀತೆ ಕಲಿಸಬಹುದು: ಕೇಂದ್ರ ಸರ್ಕಾರ

ನವದೆಹಲಿ: ಶಾಲಾ ಮಕ್ಕಳ ಪಠ್ಯದಲ್ಲಿ ಭಗವದ್ಗೀತೆ ಕಲಿಕೆಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಆದರೆ, ರಾಜ್ಯ ಸರ್ಕಾರಗಳು ಒಪ್ಪಿದರೆ ಮಾತ್ರ ಅದನ್ನು ಅನುಷ್ಠಾನಕ್ಕೆ ತರಬಹುದಾಗಿದೆ. ರಾಜ್ಯಗಳು ಬಯಸಿದರೆ ಪಠ್ಯಕ್ರಮದಲ್ಲಿ ಭಗವದ್ಗೀತೆ ಮತ್ತು ಭೋಜ್‌ಪುರಿ ಭಾಷಾ ಕಲಿಕೆಯನ್ನು ಸೇರಿಸಬಹುದು. ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಮಕ್ಕಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣಾ ದೇವಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ದೇಶದಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಕಲಿಸಲು ನಿಬಂಧನೆಗಳನ್ನು ತರಲು ಸರ್ಕಾರವು ಪರಿಗಣಿಸುತ್ತದೆಯೇ ಎಂಬ ಪ್ರಶ್ನೆಗೆ […]