ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ ಉಡುಪಿಗೆ ಆಗಮನ; ಶೋಕ ಮಾತಾ ಇಗರ್ಜಿಯಲ್ಲಿ ಶ್ರದ್ಧಾಂಜಲಿ

ಉಡುಪಿ: ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಬೆಳಿಗ್ಗೆ 9.30ಕ್ಕೆ ಸುಮಾರಿಗೆ ಮಂಗಳೂರಿನಿಂದ ಉಡುಪಿಗೆ ತರಲಾಗಿದೆ. ಉಡುಪಿ ಶೋಕ ಮಾತಾ ಇಗರ್ಜಿಗೆ ಆಗಮಿಸಿದ ಪಾರ್ಥಿವ ಶರೀರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಂತಿಮ‌ ನಮನ ಸಲ್ಲಿಸಿದರು. ಬಳಿಕ ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಅವರ ನೇತೃತ್ವದಲ್ಲಿ ಬಲಿಪೂಜೆ ಹಾಗೂ ವಿವಿಧ ಧಾರ್ಮಿಕ‌ ವಿಧಿವಿಧಾನಗಳು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ […]