ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಏಳು ಮಂದಿ ದುರ್ಮರಣ; ಹಲವರಿಗೆ ಗಾಯ

ಮಂಗಳೂರು: ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ವೊಂದು ಚಾಲಕನ ನಿಯಂತ್ರಣತಪ್ಪಿ ರಸ್ತೆ ಬದಿಯ ಮನೆ ಮೇಲೆ ಉರುಳಿಬಿದ್ದ ಪರಿಣಾಮ ಏಳು ಮಂದಿ ದುರ್ಮರಣ ಹೊಂದಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಕರ್ನಾಟಕ-ಕೇರಳ ಗಡಿಭಾಗದ ಕಲ್ಲಪ್ಲಳ್ಳಿ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಆದರ್ಶ್(12), ಶ್ರೇಯಸ್(13), ರವಿಚಂದ್ರನ್(40), ರಾಜೇಶ್(45), ಸುಮತಿ(50), ಜಯಲಕ್ಷ್ಮಿ(39) ಮತ್ತು ಸಸೀಂದ್ರ ಪೂಜಾರ(43) ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಕೇರಳದ ಪಾಣತ್ತೂರು ಎಂಬಲ್ಲಿಗೆ ಮದುವೆಗೆ 63 ಮಂದಿ ಬಸ್ ನಲ್ಲಿ ತೆರಳುತ್ತಿದ್ದರು. ಆದರೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ […]