ನಿಲ್ಲಿಸಿದ ಕಾರಿನಲ್ಲಿ ಮೃತದೇಹ ಪತ್ತೆ
ಮಂಗಳೂರು: ಇಲ್ಲಿನ ಕಂಕನಾಡಿ ಬಳಿ ನಿಲ್ಲಿಸಿದ ಕಾರಿನಲ್ಲಿ 44 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ಇಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಇವರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು ,ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು ಕಂಡುಬಂದಿತ್ತು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.