ಕರಾವಳಿಯಾದ್ಯಂತ ನಾಳೆ (ಏ.22) ಮಳೆಯಾಗುವ ಸಾಧ್ಯತೆ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಏ.21) ಮತ್ತು ಏ. 22ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಪುತ್ತೂರು, ವಿಟ್ಲ ಹಾಗೂ ಉಡುಪಿಯ ಸುತ್ತಮುತ್ತಲ ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಜಿಲ್ಲೆಗಳಲ್ಲಿ […]