ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲಾಗುವುದು: ಸಚಿವ ಅಂಗಾರ

ಕಡಬ: ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಅಧಿವೇಶನದ ಸಂದರ್ಭದಲ್ಲಿ ಕರಾವಳಿಯ ಎಲ್ಲ ಶಾಸಕರ ಉಪಸ್ಥಿತಿಯಲ್ಲಿ ವಿಶೇಷ ಸಭೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ವಿಶೇಷ ಸಭೆ ನಡೆಸಿ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು. 94ಸಿ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕೊಡುವಂತೆ ವಿನಂತಿಸಲಾಗುವುದು ಎಂದು‌ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಹೇಳಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ […]