ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಯೋಚನೆ ಇದೆ: ಸಚಿವ ಡಾ. ಅಶ್ವಥ್ ನಾರಾಯಣ್
ಕುಂದಾಪುರ: ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಮಾಡುವ ಯೋಚನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು. ಶನಿವಾರ ಕೋಟೇಶ್ವರದಲ್ಲಿ ಮಾತನಾಡಿದ ಅವರು, ಭಾರತ ಸರಕಾರ ಮತ್ತು ರಾಜ್ಯ ಸರಕಾರಗಳ ಅನುದಾನದೊಂದಿಗೆ ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಬೇಡಿಕೆ ಇದೆ. ಶೀಘ್ರದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು ಕರ್ನಾಟಕ ರಾಜ್ಯದಲ್ಲಿ ಶೇ.85 ಮೊದಲ ಡೋಸ್ ಹಾಗೂ ಶೇ.45 ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ನಲ್ಲಿ ದೇಶದಲ್ಲೇ […]