ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್‌ಎ ಒಂದೇ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಘಾಜಿಯಾಬಾದ್: ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಎಂಬ ಖೆಡ್ಡಕ್ಕೆ ಯಾರೂ ಬೀಳಬಾರದು. ಹಿಂದೂ-ಮುಸ್ಲಿಂ ಏಕತೆಯ ಹೆಸರಲ್ಲಿ ಮೊದಲು ಹಿಂದೂಗಳು ಮತ್ತು ಮುಸ್ಲಿಮರು ಒಂದೇ ಆಗಿದ್ದರು ಎಂಬ ದಾರಿತಪ್ಪಿಸುವ ಹೇಳಿಕೆಗಳಿಗೆ ಕಿವಿಕೊಡಬಾರದು. ಧರ್ಮವನ್ನು ಹೊರತು ಪಡಿಸಿ ಭಾರತೀಯರೆಲ್ಲರ ಡಿಎನ್‌ಎಗಳು ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಭಾನುವಾರ ಘಾಜಿಯಾಬಾದ್‌ನಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಸ್ಲಿಮರು ಭಾರತದಲ್ಲಿ ಇರಕೂಡದು ಎಂದು ಯಾರಾದರು ಹೇಳಿದರೆ, ಅಂತಹ ವ್ಯಕ್ತಿ […]