ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್
ಕಾಪು: ಡಿ.27ರಂದು ನಡೆಯಲಿರುವ ಕಾಪು ಪುರಸಭೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂಘಟಿತ ಪ್ರಯತ್ನದ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಕಾಪು ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳು, ಕಳೆದ ಮೂರೂವರೆ ವರ್ಷದ […]